HomeLatest Newsಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

   ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗದವರು ಅರ್ಜಿ ಸಲ್ಲಿಸಬಹುದು.

   ವೆಬ್ ಸೈಟ್ https://shp.karnataka.gov.in/bcwd  ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8050770004 ಮತ್ತು 8050770005 ನ್ನು ಸಂಪರ್ಕಿಸಲು ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular