ರಾಜ್ಯ ಸರ್ಕಾರದಿಂದ ʻಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆʼ ಗುಡ್ ನ್ಯೂಸ್ : ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ

ಬೆಳಗಾವಿ : ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ಗುತ್ತಿಗೆದಾರರಿಗೆ ಸಿಹಿಸುದ್ದಿ ನೀಡಿದ್ದು, ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಕೆಪಿಟಿಟಿ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಗುತ್ತಿಗೆದಾರರಿಗೆ ರೂ.1 ಕೋಟಿ ವರೆಗಿನ ವೆಚ್ಚದ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದ್ದು, ಅದೇ ಮಾದರಿಯಲ್ಲಿ ಹಿಂದುಳಿದ ವರ್ಗದವರಿಗೂ ಮೀಸಲಾತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

1 ಕೋಟಿ ರೂ. ವರೆಗಿನ ವೆಚ್ಚದ ಕಾಮಗಾರಿಗಳಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2(ಎ) ಪಟ್ಟಿಯಲ್ಲಿರುವ ಜಾತಿಗಳಿಗೆ ಸೇರಿದ ಗುತ್ತಿಗೆದಾರರಿಗೆ ಶೇ.15ರಷ್ಟು ಮೀಸಲಾತಿ ಅವಕಾಶ ಕಲ್ಪಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಪಿಟಿಟಿ) ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read