HomeKarnatakaಸ್ವಂತ ಮನೆ ಇಲ್ಲದ ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸ್ವಂತ ಮನೆ ಇಲ್ಲದ ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪ್ರವರ್ಗ-1 ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಂದ ಪಡೆದು ಭರ್ತಿ ಮಾಡಿ ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅ.16ರೊಳಗಾಗಿ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಬಂಧನೆಗಳು: ವಸತಿ ಸೌಲಭ್ಯದ ಫಲಾನುಭವಿಗಳು ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರೆಂದು ಗುರುತಿಸಲ್ಪಟ್ಟಿರಬೇಕು. ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಎಲ್ಲಾ ಜಾತಿಗಳಿಗೂ ಪ್ರಾತಿನಿಧ್ಯತೆಯನ್ನು ನೀಡಲಾಗುವುದು. ಅರ್ಜಿದಾರರು ಇತರೆ ಯಾವುದೇ ಯೋಜನೆ/ಇಲಾಖೆ/ನಿಗಮಗಳಿಂದ ವಸತಿ ಸೌಲಭ್ಯವನ್ನು ಪಡೆದಿರಕೂಡದು. ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಕುಟುಂಬದವರ ಹೆಸರಿನಲ್ಲಿ ನೊಂದಣಿಯಾಗಿರಬೇಕು. ಕನಿಷ್ಠ 20 ವರ್ಷಗಳವರೆಗೆ ನಿವೇಶನವನ್ನು ಪರಬಾರೆ ಮಾಡತಕ್ಕದ್ದಲ್ಲ. ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.2ಲಕ್ಷಗಳ ಮಿತಿಯೊಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರ ಡಿ.ದೇವರಾಜು ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751ಗೆ ಸಂಪರ್ಕಿಸಬಹುಸು ಎಂದು ಸುರೇಶ್‍ಬಾಬು ಅವರು ತಿಳಿಸಿದ್ದಾರೆ,

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular