ʻಬಗರ್ ಹುಕುಂʼ ಸಾಗುವಳಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಅರ್ಹರಿಗೆ ಜಮೀನು ಮಂಜೂರು

ಬೆಳಗಾವಿ : ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, “ಈ ಹಿಂದೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ವೇಳೆ ಅನರ್ಹರಿಗೂ ಜಮೀನು ಮಂಜೂರು ಮಾಡಲಾಗಿದೆ.‌ ನಿಯಮ ಮೀರಿ ಸಾಕಷ್ಟು ಅಕ್ರಮ ನಡೆಸಲಾಗಿದೆ. ಆದರೆ ಈ ಬಾರಿ ಅಂತಹ ಯಾವುದೇ ಪ್ರಹಸನಗಳಿಗೆ ಆಸ್ಪದ ಇಲ್ಲ. ಬಗರ್ ಹುಕುಂ ಸಭೆಯ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು” ಎಂದು ತಾಕೀತು ಮಾಡಿದರು.

ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ಮುಂದಿನ 6 ತಿಂಗಳಲ್ಲಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು,ಸಾಗುವಳಿ ಚೀಟಿ ನೀಡುತ್ತಿದ್ದಂತೆ ಹೊಸ ಸರ್ವೇ ನಂಬರ್ ಪೋಡಿಯನ್ನೂ ಸಹ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read