`ಬಗರ್ ಹುಕುಂ’ ಸಾಗುವಾಳಿದಾರಿಗೆ ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಭೂಮಿ ಮಂಜೂರು

ಶಿವಮೊಗ್ಗ : ಬಗರ್ ಹುಕುಂ ಸಾಗುವಾಳಿದಾರರಿಗೆ ಸಚಿವ ಮಧುಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಬಗರ್ ಹುಕುಂ ಸಮಿತಿ, ಭೂನ್ಯಾಯಾಧೀಕರಣ ಹಾಗೂ ಆರಾಧನಾ ಸಮಿತಿಗಳಿಗೆ ಸದಸ್ಯರನ್ನು ನಿರ್ದೇಶನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸೊರಬರ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಸೊರಬ ತಾಲೂಕಿನಲ್ಲಿ ಬಹುದಿನಗಳಿಂದ ರಚನೆಯಾಗದೆ ಉಳಿದಿರುವ ಬಗರ್‍ಹುಕುಂ ಸಮಿತಿ, ಭೂನ್ಯಾಯಾಧೀಕರಣ ಹಾಗೂ ಆರಾಧನಾ ಸಮಿತಿಗಳಿಗೆ ಸದಸ್ಯರನ್ನು ನಿರ್ದೇಶನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ತಹಶೀಲ್ದಾರರಿಗೆ ಸೂಚಿಸಿದರು.

 ಬಗರ್‍ಹುಕುಂ ಸಾಗುವಳಿದಾರ ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಬೇಕು. ಭೂಮಿ ಮಂಜೂರಾತಿಗಾಗಿ ಸಲ್ಲಿಸಲಾಗಿರುವ ಬಾಕಿ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿಗೊಳ್ಳಬೇಕು. ಗೆಂಡ್ಲಹೊಸೂರು ಸೇರಿದಂತೆ ಸೊರಬ ತಾಲೂಕಿನ ಇನಾಂ ಜಮೀನಿನ ಸರ್ವೇ ಕಾರ್ಯವನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸುವಂತೆ ಹಾಗೂ ತಾಳಗುಪ್ಪ-ಹುಬ್ಬಳ್ಳಿ ರೈಲ್ವೇ ಮಾರ್ಗದ ಸರ್ವೇ ಕಾರ್ಯವನ್ನು ಕೂಡಲೇ ಪೂರ್ಣಗೊಳಿಸಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read