ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದಿನಿಂದ 110 ಹಳ್ಳಿಗಳಿಗೆ ಕಾವೇರಿ 5 ನೇ ಹಂತದ ನೀರು ಪೂರೈಕೆ

ಈಗಾಗಲೇ ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ ಸಿಕ್ಕಿದ್ದು, ಇಂದಿನಿಂದ 110 ಹಳ್ಳಿಗಳಿಗೆ ಕಾವೇರಿ 5 ನೇ ಹಂತದ ನೀರು ಪೂರೈಕೆಯಾಗಲಿದೆ.

ಬನಶಂಕರಿ 6ನೇ ಹಂತ, ಎಸ್ಎಂವಿ 6ನೇ ಹಂತ ಹಾಗೂ ಗೊಟ್ಟಿಗೆರೆ ಜಿಎಲ್ಆರ್ ಮೂಲಕ ಸರಬರಾಜು ಮಾಡಬೇಕಾದ ಪ್ರದೇಶಗಳಲ್ಲಿ ಗ್ರಾಹಕರಿಗೆ ಶುಕ್ರವಾರದಿಂದ ನೀರು ಪೂರೈಕೆ ಮಾಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸೂಚನೆ ನೀಡಿದ್ದಾರೆ.ಕಾವೇರಿ ಐದನೇ ಹಂತದ ಯೋಜನೆ ಟಿ.ಕೆ. ಹಳ್ಳಿಯಲ್ಲಿ ಬುಧವಾರ ಲೋಕಾರ್ಪಣೆ ಆಗಿತ್ತು. 120 ಕಿ.ಮೀ. ದೂರದ ಬೆಂಗಳೂರಿಗೆ ಕೊಳವೆ ಮಾರ್ಗದ ಮೂಲಕ ನೀರು ಹರಿದು ಬಂದಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಚಾಲನೆ ನೀಡಿದರು.

ಭವಿಷ್ಯದ ದಿನಗಳಲ್ಲಿ ಬೆಂಗಳೂರು ನಗರದ ಕುಡಿಯುವ ನೀರಿನ ಬೇಡಿಕೆಯನ್ನು ಗಮನದಲ್ಲಿ ಇರಿಸಿಕೊಂಡು ₹7,200 ಕೋಟಿ ವೆಚ್ಚದಲ್ಲಿ ಕಾವೇರಿ ಆರನೇ ಹಂತದ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಯಿಂದ ನಗರಕ್ಕೆ ಪ್ರತಿದಿನ 5 ಕೋಟಿ ಲೀಟರ್ ನೀರು ಹೆಚ್ಚುವರಿಯಾಗಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read