ಬೆಳಗಾವಿ: ಮಹಿಳೆಯರಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಜನವರಿ, ಫೆಬ್ರವರಿ, ಮಾರ್ಚ್ ತಿಂಗಳ ಕಂತು ಬಾಕಿ ಇದ್ದು, ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು. ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಗೆ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಇನ್ನೆರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.