Namma Clinic : ಬೆಂಗಳೂರಿಗರಿಗೆ ಗುಡ್ ನ್ಯೂಸ್ : 225 ವಾರ್ಡ್ ನಲ್ಲಿ ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರು : ಬೆಂಗಳೂರಿನಲ್ಲಿ 225 ನಮ್ಮ ಕ್ಲಿನಿಕ್ ಆರಂಭವಾಗಿದೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಬಿಬಿಎಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ ಚಂದ್ರ ಮಾಹಿತಿ ನೀಡಿದ್ದಾರೆ.

ನಮ್ಮ ಕ್ಲಿನಿಕ್ ಗಳು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 9 ರಿಂದ ಸಂಜೆ 4:30 ರವರೆಗೆ ಕಾರ್ಯ ನಿರ್ವಹಿಸಲಿದೆ. ನಮ್ಮ ಕ್ಲಿನಿಕ್ ನಲ್ಲಿ 222 ಮಂದಿ ವೈದ್ಯರು, 232 ಮಂದಿ ಗ್ರೂಪ್ ಡಿ ಸಿಬ್ಬಂದಿ, 221 ನರ್ಸ್ ಗಳನ್ನು ನಿಯೋಜಿಸಲಾಗುತ್ತದೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಆರಂಭಿಸಿದ ಬಳಿಕ ಈವರೆಗೆ ಒಟ್ಟು 2,29, 473 ಮಂದಿ ಭೇಟಿ ನೀಡಿ ತಪಾಸಣೆಗೆ ಮಾಡಿಸಿಕೊಂಡು ವೈದ್ಯರಿಂದ ಅಗತ್ಯ ಸಲಹೆ, ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read