ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಕುಡಿಯುವ ನೀರಿಗಾಗಿ ಎಲ್ಲಾ ಕ್ಷೇತ್ರಗಳಿಗೆ ತಲಾ. 10 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಸರ್ಕಾರ ಮುಂದಾಗಿದ್ದು, ಎಲ್ಲಾ ಕ್ಷೇತ್ರಗಳಿಗೆ ತಲಾ. 10 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಕಾವೇರಿ ಮೂಲದಿಂದ ಬೆಂಗಳೂರು ನಗರಕ್ಕೆ ಪ್ರತಿ ದಿನ 1450 ದಶಲಕ್ಷ ಲೀಟರ್ ನೀರು ಸರಬರಾಜು ಮಾಡಲಾಗುತ್ತಿದ್ದು, ಬೆಂಗಳೂರು ನಗರದ ಹಳೆಯ ಪ್ರದೇಶಗಳಲ್ಲಿ (ಕೋರ್ ಏರಿಯಾ) ಹಾಗೂ ಹಳೆಯ 7 ನಗರಸಭೆ ಮತ್ತು 1 ಪುರಸಭೆ ಪ್ರದೇಶಗಳಿಗೆ ಪರ್ಯಾಯ ದಿನಗಳಲ್ಲಿ ಕಾವೇರಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳ ಪೈಕಿ ಕಾವೇರಿ ಕುಡಿಯುವ ನೀರಿನ ಲಭ್ಯತೆ ಖಾತರಿಪಡಿಸಿಕೊಂಡು 51 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read