ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದು ಮಧ್ಯರಾತ್ರಿ 2:45 ರವರೆಗೆ ‘ನಮ್ಮ ಮೆಟ್ರೋ’ ಸಂಚಾರ ವಿಸ್ತರಣೆ

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 2 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್) ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2.40ಕ್ಕೆ ಹೊರಡುತ್ತವೆ.

ಎಂ.ಜಿ. ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಡಿಸೆಂಬರ್ 31, 2024 ರಂದು ರಾತ್ರಿ 11 ಗಂಟೆಯಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ನಲ್ಲಿ ರೈಲುಗಳು ನಿಲ್ಲುತ್ತವೆ.
ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಗಮ್ಯಸ್ಥಾನಕ್ಕೆ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವವರು ₹50 ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಅನ್ನು ಬಳಸಬೇಕು. ಈ ಪೇಪರ್ ಟಿಕೆಟ್ ಅನ್ನು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 31ನೇ ಡಿಸೆಂಬರ್ ಬೆಳಗ್ಗೆ 8 ರಿಂದ ಮುಂಗಡವಾಗಿ ಖರೀದಿಸಲು ಲಭ್ಯವಿರುತ್ತದೆ. ಸ್ಮಾರ್ಟ್ಕಾರ್ಡ್ ಮತ್ತು ಕ್ಯೂಆರ್ ಕೋಡ್ ಟಿಕೆಟ್ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read