HomeLive NewsBIG NEWS : ಬೆಂಗಳೂರಿಗರಿಗೆ ಗುಡ್ ನ್ಯೂಸ್ : 2 ಅಂತಸ್ತಿನ ಕಟ್ಟಡಗಳಿಗೆ 'ಓಸಿ ವಿನಾಯಿತಿ'...

BIG NEWS : ಬೆಂಗಳೂರಿಗರಿಗೆ ಗುಡ್ ನ್ಯೂಸ್ : 2 ಅಂತಸ್ತಿನ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ರಾಜ್ಯ ಸರ್ಕಾರ ಆದೇಶ


ಬೆಂಗಳೂರು : ಬೆಂಗಳೂರಿಗರಿಗೆ ಗುಡ್ ನ್ಯೂಸ್ ಎಂಬಂತೆ ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು 2 ಅಂತಸ್ತು ಅಥವಾ ಸ್ಟಿಲ್ಸ್ ಮತ್ತು ೨ ಅಂತಸ್ತಿನ ಸ್ವಾಧೀನಾನುಭವ ಪತ್ರದಿಂದ (ಓಸಿ) ವಿನಾಯಿತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ-2024ರ ಅಧ್ಯಾಯ 7ರ ನಿಬಂಧನೆಗಳ ಅನ್ವಯ ಕಟ್ಟಡ ಮತ್ತು ನಗರ ಯೋಜನಾ ನಿಯಮಗಳ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಕಾರ್ಯಗತಗೊಳಿಸಲು ಲಭ್ಯವಿರುವ ಕಾರ್ಯಪಡೆಯೊಂದಿಗೆ ದೃಢವಾದ ಆಡಳಿತ ರಚನೆಯನ್ನು ವಿನ್ಯಾಸಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ (ಜಿಬಿಎ, ಬೆಂನಪಾ-1) ಎನ್.ಕೆ. ಲಕ್ಷ್ಮೇಸಾಗರ್ ಅವರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಆದೇಶದಲ್ಲಿ ನಿರ್ದೇಶನ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರದನ್ವಯ, 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ, ನಕ್ಷೆ ಮಂಜೂರಾತಿ ಪಡೆದು ನಿರ್ಮಿಸುವ ನೆಲ + 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (occupancy certificate) ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಅಧ್ಯಾಯ 7ರ ನಿಬಂಧನೆಗಳನ್ವಯ ಕಟ್ಟಡ ಮತ್ತು ನಗರ ಯೋಜನಾ ನಿಯಮಗಳ ನಿಯಂತ್ರಣ ಮತ್ತು ಮೇಲ್ವಿಚಾರಣೆಗಳನ್ನು ಕಾರ್ಯಗತಗೊಳಿಸಲು ಲಭ್ಯವಿರುವ ಕಾರ್ಯಪಡೆಯೊಂದಿಗೆ ದೃಢವಾದ ಆಡಳಿತ ರಚನೆಯನ್ನು ವಿನ್ಯಾಸಗೊಳಿಸುವಂತೆ ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರವರಿಗೆ ನಿರ್ದೇಶಿಸಿದೆ.

.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular