‘ಪುಸ್ತಕ’ ಪ್ರಿಯರಿಗೆ ಗುಡ್ ನ್ಯೂಸ್ : ನಾಳೆಯಿಂದ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ.!

ಬೆಂಗಳೂರು : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವ ಪ್ರಯುಕ್ತ 2024 ರ ನವೆಂಬರ್ ಮಾಹೆಯಲ್ಲಿ (ದಿನಾಂಕ: 01-11-2024 ರಿಂದ 30-11-2024 ರವರೆಗೆ) ಶೇ.50 ರ ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಹಾಗೂ ಆನ್ಲೈನ್ ಮೂಲಕವೂ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ.

ಓದುಗರು www.kuvempubhashabharathi.karnataka.gov.in ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ರಿಜಿಸ್ಟ್ರಾರ್, ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು ಇವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಲು ಹಾಗೂ ಪುಸ್ತಕವನ್ನು ಖರೀದಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read