HomeLatest Newsಸಾಲಗಾರರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಪರಿಹಾರ ಕಲ್ಪಿಸಲು RBI ಸಹಾಯವಾಣಿ ಆರಂಭ

ಸಾಲಗಾರರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಪರಿಹಾರ ಕಲ್ಪಿಸಲು RBI ಸಹಾಯವಾಣಿ ಆರಂಭ

ನವದೆಹಲಿ: ಸಾಲ ವಸೂಲಿ ವಿಚಾರದಲ್ಲಿ ಸಾಲಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಸಹಾಯವಾಣಿ ಆರಂಭಿಸಿದೆ.

1800 121 1322 ಸಹಾಯವಾಣಿಗೆ ಕರೆ ಮಾಡಿ ಸಾಲಗಾರರು ಸಾಲ ವಸೂಲಾತಿ ವಿಚಾರದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಸದ್ಯಕ್ಕೆ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಸಹಾಯವಾಣಿ ಇದ್ದು, ಮುಂದಿನ ದಿನಗಳಲ್ಲಿ 10 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಿರುತ್ತದೆ.

ಅನೇಕ ಸಂಸ್ಥೆಗಳು ಗ್ರಾಹಕರಿಗೆ ಸಾಲ ನೀಡಿ ವಸೂಲಿ ಮಾಡುವಾಗ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತವೆ. ಹಣಕಾಸು ಸಂಸ್ಥೆಗಳ ಕಾಟದಿಂದ ಸಾಲಗಾರರು ಆತ್ಮಹತ್ಯೆ ಮೊರೆಹೋಗುವುದು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆರ್.ಬಿ.ಐ.ನಿಂದ ಸಹಾಯವಾಣಿ ಆರಂಭಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular