HomeLatest Newsಸಾಲಗಾರರಿಗೆ ಗುಡ್ ನ್ಯೂಸ್: ಸಾಲಗಳ ಮೇಲಿನ ಬಡ್ಡಿ ದರ ಕಡಿತಗೊಳಿಸಿದ SBI

ಸಾಲಗಾರರಿಗೆ ಗುಡ್ ನ್ಯೂಸ್: ಸಾಲಗಳ ಮೇಲಿನ ಬಡ್ಡಿ ದರ ಕಡಿತಗೊಳಿಸಿದ SBI

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ರೆಪೊ ದರವನ್ನು ಶೇಕಡ 0.25 ರಷ್ಟು ಕಡಿತಗೊಳಿಸಿದ ಬೆನ್ನಲ್ಲೇ ಸರ್ಕಾರಿ ವಲಯದ ಬಹುದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಇದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಿದೆ.

ಬೇರೆ ಬ್ಯಾಂಕುಗಳ ಹಾದಿಯನ್ನೇ ಅನುಸರಿಸಿರುವ ಎಸ್‌ಬಿಐ ತನ್ನೆಲ್ಲ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇಕಡ 0.25 ರಷ್ಟು ಕಡಿತಗೊಳಿಸಿದೆ. ಇದರಿಂದಾಗಿ ಸಾಲಗಾರರ ಬಡ್ಡಿ ಹೊರೆ ಕಡಿಮೆಯಾಗಲಿದೆ. ಡಿಸೆಂಬರ್ 15 ರಿಂದ ಹೊಸ ದರ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

ಠೇವಣಿಗಳ ಮೇಲೆ ನೀಡುವ ಬಡ್ಡಿ ದರವನ್ನು ಎಸ್‌ಬಿಐ ಕಡಿತ ಮಾಡಿದೆ. 2ರಿಂದ 3 ವರ್ಷದ ಒಳಗಿನ ಸಾಮಾನ್ಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ. 6.5ರಿಂದ ಶೇಕಡ 6.4ಕ್ಕೆ ಇಳಿಕೆ ಮಾಡಲಾಗಿದೆ. ಹಿರಿಯ ನಾಗರೀಕರ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡ 7ರಿಂ ಶೇ. 6.9 ಕ್ಕೆ ಕಡಿತಗೊಳಿಸಲಾಗಿದೆ. 7 ದಿನಗಳಿಂದ ಒಂದು ವರ್ಷದವರೆಗಿನ ಅಲ್ಪಾವಧಿ ಠೇವಣಿ, ಮೂರು ವರ್ಷಕ್ಕಿಂತ ಹೆಚ್ಚಿನ ನಿಶ್ಚಿತ ಠೇವಣಿ ಮೇಲಿನ ಬಡ್ಡಿ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular