HomeLatest Newsಬಿಪಿಎಲ್ ಸೇರಿ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಪಡಿತರದಲ್ಲಿ ಬೇಳೆ, ಸಕ್ಕರೆ, ಎಣ್ಣೆ ಕಿಟ್...

ಬಿಪಿಎಲ್ ಸೇರಿ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಪಡಿತರದಲ್ಲಿ ಬೇಳೆ, ಸಕ್ಕರೆ, ಎಣ್ಣೆ ಕಿಟ್ ವಿತರಣೆ

ಕೊಪ್ಪಳ: ಅನ್ನಭಾಗ್ಯ ಯೋಜನೆಯಡಿ ಪಡಿತರದಲ್ಲಿ ಆಹಾರ ಧಾನ್ಯದ ಕಿಟ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕುಕನೂರು ಪಟ್ಟಣ ಪ್ರವಾಸಿ ಮಂದಿರದಲ್ಲಿ ನಡೆದ ಕುಕನೂರು, ಯಲಬುರ್ಗಾ ತಾಲೂಕಿನ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಪಡಿತರ ಧಾನ್ಯದಲ್ಲಿ 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಪಡಿತರದ ಹಣ 150 ರೂಪಾಯಿಯನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಹಣ ನೀಡುವ ಬದಲು ಪಡಿತರ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣ ನೀಡುವ ಬದಲು ತೊಗರಿ ಬೇಳೆ, ಕೊಬ್ಬರಿ ಎಣ್ಣೆ, ಸಕ್ಕರೆ, ಜೋಳ ಹೀಗೆ ಆಹಾರ ಧಾನ್ಯಗಳ ಕಿಟ್ ಮಾಡಿ ವಿತರಿಸುವ ಯೋಜನೆ ಇದೆ. ಇದನ್ನು ರಾಜ್ಯಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular