HomeLatest Newsಬಿಪಿಎಲ್ ಸೇರಿ ಅನ್ನಭಾಗ್ಯ ಯೋಜನೆಯ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಬಿಪಿಎಲ್ ಸೇರಿ ಅನ್ನಭಾಗ್ಯ ಯೋಜನೆಯ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಜುಲೈ 2025ರ ಮಾಹೆಗೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಹಂಚಿಕೆ ಮಾಡಲಾಗಿದೆ. ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 2.ಕೆ.ಜಿ ಅಕ್ಕಿಯನ್ನು ಹಾಗೂ 3 ಕೆ.ಜಿ ರಾಗಿಯನ್ನು ಜುಲೈ 31 ರವರೆಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸುವುದರೊಂದಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ.

ಅಂತ್ಯೋದಯ(ಎಎವೈ) ಪಡಿತರದಾರರಿಗೆ 1 ರಿಂದ 3 ಸದಸ್ಯರಿರುವ ಪಡಿತರ ಚೀಟಿಗಳಿಗೆ 21 ಕೆಜಿ ಅಕ್ಕಿ ಮತ್ತು ರಾಗಿ, ಹಂಚಿಕೆ. ಆದ್ಯತಾ(ಪಿಹೆಚ್‍ಹೆಚ್ ಸೆಂಟ್ರಲ್) ಕಾರ್ಡ್‍ದಾರರರಿಗೆ 7ಕೆಜಿ ಅಕ್ಕಿ ಹಾಗೂ 3 ಕೆಜಿ ರಾಗಿ, ಆದ್ಯತಾ(ಪಿಹೆಚ್‍ಹೆಚ್ ಸ್ಟೇಟ್) ಪ್ರತಿ ಸದಸ್ಯರಿಗೆ ತಲಾ 10 ಕೆಜಿ, ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡಿತರ ಪಡೆಯಲು ಅವಕಾಶವಿದೆ ಎಂದು ದಾವಣಗೆರೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮಧುಸೂದನ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular