BIG NEWS : ರಾಜ್ಯ ಸರ್ಕಾರದಿಂದ ‘ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ ; ಕೈಗೆಟಕುವ ದರದಲ್ಲಿ ಸಿಗಲಿದೆ ಚಿಕಿತ್ಸೆ.!

ಬೆಂಗಳೂರು : ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕ್ಯಾನ್ಸರ್ ರೋಗಿಗಳಿಗೆ ಸರ್ಕಾರದ ವಿವಿಧ ಯೋಜನೆಯಡಿ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಬಡತನ ರೇಖೆಗಿಂತ ಕಡಿಮೆ (BPL) ಇರುವ ಕುಟುಂಬಗಳಿಗೆ Ab-Ark (ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ) ಯೋಜನೆಯಡಿಯಲ್ಲಿ ₹5 ಲಕ್ಷದವರೆಗೂ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಹಾಗೂ ಬಡತನ ರೇಖೆಗಿಂತ ಮೇಲಿರುವ (APL) ಕುಟುಂಬಗಳಿಗೆ ರಿಯಾಯಿತಿ ಅಂದರೆ 30% ಸರ್ಕಾರದ ಅಡಿಯಿಂದ ಮತ್ತು 70% ರೋಗಿಗಳಿಂದ ಪಡೆದು ಚಿಕಿತ್ಸೆಗಾಗಿ ಭರಿಸಲಾಗುತ್ತದೆ.

ಇದಲ್ಲದೇ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆ ಅಡಿಯಲ್ಲಿ ಉಚಿತ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತದೆ (Rare Disease) ಯೋಜನೆಯಡಿಯಲ್ಲಿ ದುಬಾರಿ ಚಿಕಿತ್ಸೆಗಳಾದ ರೋಬೋಟಿಕ್ ಶಸ್ತ್ರಚಿಕಿತ್ಸೆ, ಅಸ್ಥಿಮಜ್ಜೆ (Bone Marrow) ಹಾಗೂ ಬಡತನ ರೇಖೆಗಿಂತ ಕಡಿಮೆ (BPL) ಇರುವ ಕುಟುಂಬಗಳಿಗೆ ಕ್ಯಾನ್ಸರ್ ತಪಾಸಣೆಗೆ PET-SCANಅನ್ನು ಸಂಪೂರ್ಣ ಉಚಿತವಾಗಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ನೀಡಲಾಗುತ್ತಿದೆ.
ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಾದ್ಯಂತ 31 ಜಿಲ್ಲಾ ಆಸ್ಪತ್ರೆಗಳಲ್ಲಿ ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡಲು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.ಹೃದಯಜ್ಯೋತಿ ಯೋಜನೆಯಡಿ Hub and Spoke ಮಾದರಿಯಲ್ಲಿ 16 ಜಿಲ್ಲಾ ಆಸ್ಪತ್ರೆಗಳು ಮತ್ತು 70 ತಾಲೂಕು ಆಸ್ಪತ್ರೆಗಳಲಿ ಹಠಾತ್ ಹೃದಯಾಘಾತ ಚಿಕಿತ್ಸೆಗೆ ಒಟ್ಟು 86 ಉಪಕರಣಗಳು ಲಭ್ಯವಿದೆ.ರಾಜ್ಯದಾದ್ಯಂತ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವವರಿಗೆ 193 ಕೇಂದ್ರಗಳಲ್ಲಿ ಒಟ್ಟು 763 ಡಯಾಲಿಸಿಸ್ ಯಂತ್ರಗಳು ಲಭ್ಯವಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read