ಬೆಂಗಳೂರು : 2025-26ನೇ ಸಾಲಿಗೆ ಬೆಂಗಳೂರಿನಲ್ಲಿ Ashirvad Pipes Private Limited ಸಂಸ್ಥೆಯವರ ಸಹಯೋಗದೊಂದಿಗೆ ವಸತಿಯುತ ವೃತ್ತಿ ಆಧಾರಿತ ಕೌಶಲ್ಯತರಬೇತಿ ಪಡೆಯಲು ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳಿಗೆ ಸೂಚನೆ
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ).
ವಿದ್ಯಾರ್ಹತೆ: 8ನೇ ತರಗತಿ, ಎಸ್.ಎಸ್.ಎಲ್.ಸಿ. ಐ.ಟಿ.ಐಡಿಪ್ಲೋಮ, ಪಿ.ಯು.ಸಿ. ಉತ್ತೀರ್ಣರಾದಮತ್ತು ಪದವಿ ಅಭ್ಯರ್ಥಿಗಳು. ಉತ್ತೀರ್ಣರಾದ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಯ ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ(ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ). ಕೇಂದ್ರ ಮತ್ತುರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
20/01/2026
ಅರ್ಜಿ ಸಲ್ಲಿಸಲುಕೊನೆಯ ದಿನಾಂಕ
31/01/2026
ಅರ್ಜಿದಾರರು ಸಂಬಂಧಪಟ್ಟ ಜಿಲ್ಲಾಕಛೇರಿ, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಇವರಿಂದ ಮಾಹಿತಿ ಪಡೆದು ಮಾರ್ಗಸೂಚಿಗಳನ್ವಯ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾಕಛೇರಿ, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು.


