ಬಡಗಿ, ಅಕ್ಕಸಾಲಿಗರು, ಕ್ಷೌರಿಕರಿಗೆ ಗುಡ್ ನ್ಯೂಸ್ : `ವಿಶ್ವಕರ್ಮ ಯೋಜನೆ’ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ : ಬಡಗಿ, ಅಕ್ಕಸಾಲಿಗರು, ಕ್ಷೌರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, 15 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ವಿಶ್ವಕರ್ಮ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, 15 ಸಾವಿರ ಕೋಟಿ ರೂ.ಗಳ ವಿಶ್ವಕರ್ಮ ಯೋಜನೆಯನ್ನು ವಿಶ್ವಕರ್ಮ ಜಯಂತಿ ದಿನವಾದ ಸೆ. 17 ರಂದು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಬಡಗಿಗಳು, ಕಲ್ಲು ಕೆಲಸ ಮಾಡುವವರು, ಚಿನ್ನದ ಕೆಲಸ ಮಾಡುವವರು, ಅಗಸರು, ಕ್ಷೌರಿಕರು ಸೇರಿದಂತೆ ವಿವಿಧ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ 13.5 ಕೋಟಿ ಇತರೆ ಹಿಂದುಳಿದ ವರ್ಗಗಳ ಜನತರಿಗೆ ಇನ್ನಷ್ಟು ಅವಕಾಶಗಳನ್ನು ಸೃಷ್ಟಿಸಿ ಅವರಿಗೆ ಬಲ ತುಂಬುವ ನಿಟ್ಟಿಯಲ್ಲಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read