GOOD NEWS : ‘ಜಾತಿ ಗಣತಿ’ ಸಮೀಕ್ಷಾದಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 20,000 ಗೌರವಧನ ಘೋಷಣೆ.!

ಬೆಂಗಳೂರು : ರಾಜ್ಯದ ಜಾತಿ ಗಣತಿ ಸಮೀಕ್ಷಾದಾರರಿಗೆ ಗುಡ್ ನ್ಯೂಸ್ ಎಂಬಂತೆ ಸರ್ಕಾರ 20,000 ಗೌರವಧನ ನೀಡಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ನರಕ ಚತುರ್ದಶಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ. ಸಮೀಕ್ಷೆಯ ವೇಳೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷಾದಾರರಿಗೆ ₹20,000 ಗೌರವಧನ ಕೊಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸೆಪ್ಟೆಂಬರ್ 22 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಕೊಪ್ಪಳದಲ್ಲಿ ಸಮೀಕ್ಷೆ ಕಾರ್ಯ ಶೇ.97 ಪೂರ್ಣವಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗವು ಈ ಬಗ್ಗೆ ಚರ್ಚಿಸಿದೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 ಕೆಲಸದ ದಿನಗಳ ರಜೆ ವಿಸ್ತರಿಸಲಾಗಿದೆ. ಇದೇ 12ನೇ ತಾರೀಕಿನಿಂದ ದ್ವಿತೀಯ ಪಿ.ಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 6,700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ. ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದುದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read