ಬೆಸ್ತ, ಕಬ್ಬಲಿಗ ಸೇರಿದಂತೆ ಪ್ರವರ್ಗ-1 ವರ್ಗದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪ್ರವರ್ಗ-1 ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ದಿ: 02-11-2023 ರವರೆಗೆ ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದು. ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ.

ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು ಮತ್ತು ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ಹೆಚ್ಚಿನ ಮಾಹಿತಿಯನ್ನು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಅಥವಾ ನಿಗಮದ ವೆಬ್‍ಸೈಟ್ http://ambigaradevelopment.karnataka.gov.in ಹಾಗೂ ನಿಗಮದ ಸಹಾಯವಾಣಿ ಸಂಖ್ಯೆ 080-22864099/08182-229634 ಗೆ ಸಂಪರ್ಕಿಸಿ ಪಡೆಯಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read