HomeLatest Newsತುಟ್ಟಿ ಭತ್ಯೆ ಹೆಚ್ಚಳ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರು, ನಿವೃತ್ತರಿಗೆ ಗುಡ್ ನ್ಯೂಸ್

ತುಟ್ಟಿ ಭತ್ಯೆ ಹೆಚ್ಚಳ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರು, ನಿವೃತ್ತರಿಗೆ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರ ತುಟ್ಟಿ ಭತ್ಯೆ ಶೀಘ್ರವೇ ಹೆಚ್ಚಳವಾಗಲಿದೆ. ಜನವರಿ ಒಂದರಿಂದಲೇ ತುಟ್ಟಿ ಭತ್ಯೆ ಏರಿಕೆಯಾಗಲಿದ್ದು, ಈ ತಿಂಗಳ ವೇತನದಲ್ಲಿ ಹೆಚ್ಚಳವಾಗಲಿದೆ.

ಕೇಂದ್ರ ಸರ್ಕಾರ ನೌಕರರು ಮತ್ತು ನಿವೃತ್ತ ನೌಕರರ ತುಟ್ಟಿ ಭತ್ಯೆ(ಡಿಎ) ಮತ್ತು ಡಿಯರ್ ನೆಸ್(ಡಿಆರ್) ಪರಿಹಾರದಲ್ಲಿ ಶೇಕಡ 2ರಷ್ಟು ಏರಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಡಿಸೆಂಬರ್ 31ರಂದು ಬಿಡುಗಡೆ ಮಾಡಿದ 2025 ನವೆಂಬರ್ ನ ಅಖಿಲ ಭಾರತ ಕೈಗಾರಿಕಾ ಕಾರ್ಮಿಕ ಗ್ರಾಹಕರ ದರ ಸೂಚ್ಯಂಕದ ಹಿನ್ನೆಲೆಯಲ್ಲಿ ಡಿಎ ಮತ್ತು ಡಿಆರ್ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಜನವರಿ 1ರಿಂದ ಏರಿಕೆ ಅನ್ವಯವಾಗಲಿದ್ದು, ಈ ತಿಂಗಳ ವೇತನದಲ್ಲಿ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular