ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಬಿ.ಬಿ.ಎಸ್., ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್ ಬಿ.ಟೆಕ್, ಮತ್ತು ಬಿ.ಆಯುಷ್, ಎಂಬಿಎ, ಎಂಸಿಎ, ಎಲ್ಎಲ್ಬಿ, ಬಿ.ಫರ್ಮಾ, ಎಂ.ಫಾರ್ಮಾ, ಡಿ.ಫಾರ್ಮಾ ಇಂತಹ ಕೋರ್ಸ್ಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದ ವೆಬ್-ಸೈಟ್ kmdconline.karnataka.gov.inನಲ್ಲಿ ಆನ್-ಲೈನ್ ಮುಖಾಂತರ ಡಿಸೆಂಬರ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹಾರ್ಡ್ ಕಾಪಿಗಳನ್ನು ಹಾಗೂ ಮುಚ್ಚಳಿಕೆ ಪತ್ರವನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002. ಫೋ :8277944215, ಸಂಪರ್ಕಿಸಬೇಕೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
