ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ಬಳಿಕವೇ ಸಿಇಟಿ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೈಗೊಂಡಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾರ್ಷಿಕ ಪರೀಕ್ಷೆ 2ರ ಫಲಿತಾಂಶ ಪ್ರಕಟವಾದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸಲಿದೆ.
ಇದರೊಂದಿಗೆ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ 1 ಮತ್ತು 2ರ ಪೈಕಿ ಯಾವ ಪರೀಕ್ಷೆಯಲ್ಲಿ ಉತ್ತಮ ಅಂಕವಿದೆಯೋ ಅದನ್ನು ಪರಿಗಣಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಸನ್ನ . ಎಚ್ ತಿಳಿಸಿದ್ದಾರೆ.