ಮಕ್ಕಳಿಗೆ ಗುಡ್ ನ್ಯೂಸ್: ಅಂಗನವಾಡಿ ಕೇಂದ್ರಗಳ ಸಮಯದಲ್ಲಿ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ, ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳೆಗೆ 8 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ನಿಗದಿಪಡಿಸಲಾಗಿದೆ.

 ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್ ನ ಇತರೆ ಸೇವೆಗಳಿಗೆ ತೊಂದರೆಯಾಗದಂತೆ ಸಮಯ ಬದಲಾವಣೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read