ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಜಾಲತಾಣ HTTPS://ONLINE.KSB.GOV.IN ರಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:03/01/2025 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read