ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ : ಕಾಫಿ ಮಂಡಳಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ(2024-25) ಸಾಲಿಗೆ ಕಾಫಿ ಮಂಡಳಿ ವತಿಯಿಂದ ಕಾಫಿ ತೋಟದ ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕಾಫಿ ಮರುನಾಟಿ, ನೀರಾವರಿ ಯೋಜನೆಯಡಿ ಕೆರೆ, ತೆರೆದ ಬಾವಿ, ರಿಂಗ್ ಬಾವಿ, ಸ್ಪ್ರಿಂಕ್ಲರ್ ಇರಿಗೇಷನ್, ಹನಿ ನೀರಾವರಿಗೆ-ವಾಟರ್ ಅಗ್ಮೆಂಟೇಷನ್, ಕಾಫಿಗೋಡೌನ್, ಕಾಫಿ ಕಣ, ಪಲ್ಪರ್ ಯುನಿಟ್, ಇಕೋ ಪಲ್ಪರ್, ಮೆಕಾನಿಕಲ್ ಡ್ರೈಯರ್, ಸೋಲಾರ್ ಟನೆಲ್ ಡ್ರೈಯರ್-ಕ್ವಾಲಿಟಿ ಅಪ್ಗ್ರೇಡೇಷನ್, ಬಿಳಿಕಾಂಡ ಕೊರಕದ ಹತೋಟಿಗಾಗಿ ನಾನ್ ವೋವನ್ ಪ್ಯಾಬ್ರಿಕ್ ರ್ಯಾಪಿಂಗ್ ಮೆಟಿರಿಯಲ್, ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಮತ್ತಿತರ ಕಾರ್ಯ ಚಟುವಟಿಕೆಗಳಿಗೆ ಸಹಾಯಧನದ ಯೋಜನೆಯನ್ನು ಅನುಮೋದಿಸಲಾಗಿದೆ.

25ಎಚ್ಎ(61.75 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ತಮ್ಮ ತೋಟವನ್ನು ಅಭಿವೃದ್ಧಿ ಪಡಿಸಲಿಚ್ಚಿಸುವ ಅರ್ಹ ಕಾಫಿ ಬೆಳೆಗಾರರು, ಈ ಎಲ್ಲಾ ಚಟುವಟಿಕೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕಾಫಿ ಮಂಡಳಿಯ ಉಪ ನಿರ್ದೇಶಕರು(ವಿಸ್ತರಣೆ) ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read