ಬೆಂಗಳೂರು: ಇನ್ನೊಂದು ತಿಂಗಳಲ್ಲಿ 15 ನಿಮಿಷಕ್ಕೆ ಒಂದು ಹಳದಿ ಮೆಟ್ರೋ ರೈಲು ಸಂಚರಿಸಲಿದೆ. ಸದ್ಯ 3 ರೈಲು ಸಂಚರಿಸುತ್ತಿರುವುದರಿಂದ ಪ್ರತಿ 25 ನಿಮಿಷಕ್ಕೆ ಒಂದು ರೈಲು ಸಂಚರಿಸುತ್ತಿದ್ದು, ಇದರಿಂದ ಹಳದಿ ಮಾರ್ಗದ ಮೆಟ್ರೋದಲ್ಲಿ ಕಾಲಿಡುವುದಕ್ಕೂ ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ.
ಇನ್ನೊಂದು ತಿಂಗಳಲ್ಲಿ ನಾಲ್ಕನೇ ರೈಲು ಸಂಚಾರಕ್ಕೆ ಸೇರ್ಪಡೆಯಾದ ಬಳಿಕ ಪ್ರತಿ 15 ನಿಮಿಷಕ್ಕೆ ಒಂದು ರೈಲು ಓಡಿಸಲು ಸಾಧ್ಯವಾಗಲಿದೆ. ಹಳದಿ ಮಾರ್ಗದ ಹುಸ್ಕೂರು ಮೆಟ್ರೋ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಕುರ್ಚಿ ವ್ಯವಸ್ಥೆ ಕೂಡ ಇಲ್ಲ. ಮೆಟ್ರೋ ಕಾಯುವಿಕೆ ಅವಧಿ ಹೆಚ್ಚಾಗಿರುವುದರಿಂದ ಗರ್ಭಿಣಿಯರು, ವೃದ್ಧರು ನಿಂತುಕೊಂಡೇ ರೈಲು ಕಾಯಬೇಕಾದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಆಸನಗಳ ವ್ಯವಸ್ಥೆ ಮಾಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.