ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 1,500 ರೂ. ಬೆಂಬಲ ಬೆಲೆ ಹೆಚ್ಚಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 12,000 ರೂ. ಜೊತೆಗೆ ರಾಜ್ಯ ಸರ್ಕಾರ 1,500 ರೂ. ಒದಗಿಸಲು ಅದೇಶ ಹೊರಡಿಸಿದೆ.

ರಾಜ್ಯದ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ವಿಂಟಲ್‌ ಕೊಬ್ಬರಿಗೆ ಕೇಂದ್ರದ 12,000 ರೂ. ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರದಿಂದ 1,500 ರೂ. ಗಳಂತೆ ನೀಡಲು 93,75 ಕೋಟಿ ರೂ. ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗಿರುವ ಎಫ್.ಎ.ಕ್ಕೂ ಗುಣಮಟ್ಟದ ಕೊಬ್ಬರಿಗೆ, 2022-23ನೇ ಸಾಲಿಗೆ ಘೋಷಿಸಲಾದ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಪತಿ ಕ್ವಿಂಟಾಲ್ ಕೊಬ್ಬರಿಗೆ 1,250 ರೂ. ಜೊತೆಗೆ 2024ನೇ ಸಾಲಿಗೆ ಪ್ರತಿ ಕ್ವಿಂಟಾಲಿಗೆ 250 ರೂ. ಸೇರಿ ಒಟ್ಟು ರೂ.1,500 ಗಳ  ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಲು ಹಾಗೂ ಇದಕ್ಕೆ ಅವಶ್ಯವಿರುವ ರೂ.93,75 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read