ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಸುವರ್ಣಸೌಧದ ಸಂಪುಟ ಸಭಾ ಮಂದಿರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡಿಸಲು ಗ್ರೀನ್ ಸಿಗ್ನಲ್ ನೀಡುವ ಮೂಲಕ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಅವರ ವರದಿ ಶಿಫಾರಸು ಅಳವಡಿಸಿಕೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಪಂದ್ಯ ನಡೆಯುವ ಸಂದರ್ಭ ಭದ್ರತೆ ಒದಗಿಸುವ ಬಗ್ಗೆ ಗೃಹ ಇಲಾಖೆಯೊಂದಿಗೆ ಕೆ.ಎಸ್.ಸಿ.ಎ. ಚರ್ಚೆಗೆ ಸೂಚನೆ ನೀಡಲಾಗಿದೆ. ಗೃಹ ಇಲಾಖೆ ಸೂಚಿಸುವ ನಿಬಂಧನೆಗಳನ್ನು ಅಳವಡಿಸಿಕೊಂದು ಪಂದ್ಯ ನಡೆಸಬಹುದು ಎನ್ನಲಾಗಿದೆ.
