ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುವ ಮೇ 17 ಮತ್ತು 23 ರಂದು ರಾತ್ರಿ ನಮ್ಮ ಮೆಟ್ರೋ ಸೇವೆ ವಿಸ್ತರಿಸಲಾಗಿದೆ.
ಎಲ್ಲಾ 4 ಟರ್ಮಿನಲ್ ಗಳಿಂದ ವೈಟ್ಫೀಲ್ಡ್(ಕಾಡುಗೋಡಿ), ಚೆಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದಾವರ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆ ಮಧ್ಯರಾತ್ರಿ ಒಂದು ಗಂಟೆಯವರೆಗೆ ವಿಸ್ತರಿಸಲಾಗಿದೆ, ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಕೊನೆಯ ರೈಲು ಮಧ್ಯರಾತ್ರಿ 1.35ಕ್ಕೆ ಹೊರಡಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.