HomeKarnatakaಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಐಪಿಎಲ್ ಟಿ20 ಪಂದ್ಯಗಳು ಏಪ್ರಿಲ್ 15, 18 ಮತ್ತು 24ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಏಪ್ರಿಲ್ 15 ಮತ್ತು 24ರ ರಾತ್ರಿ ಪಂದ್ಯಗಳ ದಿನಗಳಲ್ಲಿ ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ.

ಈ ದಿನಗಳಲ್ಲಿ, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಕೆಳಗಿನ ವೇಳಾಪಟ್ಟಿಯಂತೆ ಹೊರಡಲಿವೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈಟ್‌ಫೀಲ್ಡ್(ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟದಿಂದ ರಾತ್ರಿ 12.45ಕ್ಕೆ.

ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45ಕ್ಕೆ.

ಬೊಮ್ಮಸಂದ್ರ ದಿಂದ ರಾತ್ರಿ 12.30ಕ್ಕೆ ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡಲಿದೆ.

ದಿನಾಂಕ 18ನೇ ಏಪ್ರಿಲ್ 2026 ರಂದು ನಡೆಯಲಿರುವ ಹಗಲು ಹಾಗೂ ರಾತ್ರಿ ಕ್ರಿಕೆಟ್ ಪಂದ್ಯದ ದಿನದಂದು ಮೆಟ್ರೋ ರೈಲು ಸೇವೆಗಳ ಅವಧಿಯಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ. ರೈಲುಗಳು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

ನಮ್ಮ ಮೆಟ್ರೋ ಪ್ರಯಾಣವನ್ನು ಸುಗಮಗೊಳಿಸಲು, ಎರಡು ಮಾರ್ಗಗಳ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಕ್ಯೂಆ‌ರ್ (QR) ಕೋಡ್ ಡಿಜಿಟಲ್ ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ಒಳಗೊಂಡಿರುತ್ತದೆ.

ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ / ನಿರ್ಗಮನ ಗೇಟ್‌ ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಹಾಗೂ ಲಿಂಕ್ ರಸ್ತೆ, ಭಾಗದಿಂದ ಪ್ರವೇಶ | ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಸೂಚಿಸಲಾಗಿದೆ.

ಪಂದ್ಯದ ದಿನದಂದು ಪ್ರೇಕ್ಷಕರಿಗೆ ಅನುಕೂಲವಾಗಲು ಮತ್ತು ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಲು, ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿದೆ. ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯವನ್ನು ಎರಡು ಚಕ್ರ ವಾಹನಗಳಿಗೆ ರೂ. 30/- ಮತ್ತು ಕಾರುಗಳಿಗೆ ರೂ. 60/- ನಿಗದಿತ ದರದಲ್ಲಿ ಒದಗಿಸಲಾಗುತ್ತದೆ. ಈ ದರವು ಆ ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾನ್ಯವಾಗಿರುತ್ತದೆ. (ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ನಿಲ್ದಾಣದ ವಿವರಗಳು ಅನುಬಂಧದಲ್ಲಿ ಲಭ್ಯವಿದೆ).

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ, ಮೆಟ್ರೋ ಮೂಲಕ ಸ್ಟೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸುವಂತೆ ಸಲಹೆ ನೀಡಲಾಗಿದೆ. ಇದರಿಂದ ಕೇಂದ್ರ ವ್ಯವಹಾರ ಪ್ರದೇಶ (ಸಿಬಿಡಿ) ಹಾಗೂ ಸ್ಟೇಡಿಯಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಸಹಾಯವಾಗುತ್ತದೆ.

ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷತೆ ಮತ್ತು ಜನಸಂದಣಿಯನ್ನು ತಪ್ಪಿಸಲು ಪೊಲೀಸ್, ಸ್ಟೇಡಿಯಂ ನಿರ್ವಹಣೆ ಮತ್ತು ಬಿಎಂಆರ್‌ಸಿಎಲ್ ಸಿಬ್ಬಂದಿಯ ನಿರ್ದೇಶನಗಳನ್ನು ಅನುಸರಿಸಲು ವಿನಂತಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular