ಬೆಂಗಳೂರು : ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಈ ಬಾರಿ ಬೆಂಗಳೂರಿನಲ್ಲೇ ಐಪಿಎಲ್ ಪಂದ್ಯ ಉದ್ಘಾಟನೆಗೊಳ್ಳಲಿದೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ‘ಬೆಂಗಳೂರಿನಲ್ಲೇ ಐಪಿಎಲ್ ಪಂದ್ಯ ಉದ್ಘಾಟನೆಗೊಳ್ಳಲಿದೆ. ಉದ್ಘಾಟನಾ ಪಂದ್ಯ ದಿನಾಂಕ ಶೀಘ್ರ ನಿಗದಿ ಮಾಡಲಾಗುತ್ತದೆ ಎಂದರು.
ಈ ಸಂಬಂಧ ನಾನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಮಾತನಾಡಿದ್ದು ಅವರು ಸಹ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲೇ ಐಪಿಎಲ್ ಪಂದ್ಯ ಉದ್ಘಾಟನೆಗೊಳ್ಳಲಿದೆ ಎಂದರು.
ಅಂತರಾಷ್ಟ್ರೀಯ ಪಂದ್ಯಗಳನ್ನ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸುವುದು ಸುಲಭದ ಕೆಲಸವಲ್ಲ. ಅಂದು ಕಾಲ್ತುಳಿತ ದುರಂತ ನಡೆದಿದೆ, ಬೆಂಗಳೂರಿನಲ್ಲಿ ಪಂದ್ಯ ನಡೆಸಲು ಬಿಸಿಸಿಐ ಸ್ಪಂದಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

