HomeLatest Newsಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಗುಡ್ ನ್ಯೂಸ್: ಧನಸಹಾಯ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಗುಡ್ ನ್ಯೂಸ್: ಧನಸಹಾಯ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಧನಸಹಾಯ ಯೋಜನೆಯ ಆನ್‌ಲೈನ್ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ.

ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು Sevasindhu.karnataka.gov.in ಮುಖಾಂತರ ಡಿಸೆಂಬರ್ 1 ರಿಂದ ಡಿ. 30 ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಯೋಜನೆಗಳಿಗೆ ಅರ್ಜಿ ಸಲ್ಲಿಕೆಯ ಕಾಲಾವಧಿಯನ್ನು 10 ದಿನಗಳವರೆಗೆ ವಿಸ್ತರಿಸಲಾಗಿದ್ದು, 2025ರ ಡಿಸೆಂಬರ್ 31 ರಿಂದ 2026ರ ಜನವರಿ 9ರವರೆಗೆ ಅರ್ಜಿ ಸಲ್ಲಿಸಲು ಕಾಲಾವಾಕಾಶ ನೀಡಲಾಗಿದೆ.

ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular