ಗ್ರಾಹಕರಿಗೆ ಗುಡ್ ನ್ಯೂಸ್: ಇಂದಿನಿಂದ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಇಲ್ಲದವರಿಗೆ ದಂಡ ಶುಲ್ಕ ಸಂಪೂರ್ಣ ಮನ್ನಾ: ಕೆನರಾ ಬ್ಯಾಂಕ್ ಘೋಷಣೆ

ಬೆಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಉಳಿತಾಯ ಖಾತೆಗಳ ಮೇಲಿನ ಕನಿಷ್ಠ ತಿಂಗಳ ಮೊತ್ತ ಕಾಯ್ದುಕೊಳ್ಳದಿರುವುದಕ್ಕೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಿದೆ.

ಉಳಿತಾಯ ಖಾತೆಗಳು, ವೇತನ ಖಾತೆಗಳು, ಅನಿವಾಸಿ ಭಾರತೀಯ ಉಳಿತಾಯ ಖಾತೆಗಳು ಸೇರಿದಂತೆ ಎಲ್ಲಾ ರೀತಿಯ ಉಳಿತಾಯ ಬ್ಯಾಂಕ್ ಖಾತೆಗಳ ಮೇಲಿನ ಕನಿಷ್ಠ ತಿಂಗಳ ಮೊತ್ತ ಕಾಯ್ದುಕೊಳ್ಳದೆ ಇರುವವರಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಸಂಪೂರ್ಣ ಮನ್ನ ಮಾಡುವುದಾಗಿ ಘೋಷಿಸಲಾಗಿದೆ.

ಜೂನ್ 1ರಿಂದ ಜಾರಿಗೆ ಬರುವಂತೆ ಕೆನರಾ ಬ್ಯಾಂಕ್ ನ ಎಲ್ಲಾ ರೀತಿಯ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳದೆ ಇರುವುದಕ್ಕೆ ಯಾವುದೇ ದಂಡ ವಿಧಿಸುವುದಿಲ್ಲ.

ಬ್ಯಾಂಕಿನ ಗ್ರಾಹಕರು ಕೆನರಾ ಬ್ಯಾಂಕ್ ಉಳಿತಾಯ ಖಾತೆಗಳಲ್ಲಿ ಇನ್ನು ಮುಂದೆ ತಮ್ಮ ಖಾತೆಗಳಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳದಿರುವುದಕ್ಕೆ ದಂಡ ಅಥವಾ ಶುಲ್ಕ ಪಾವತಿಸಬೇಕಿಲ್ಲ ಎಂದು ಕೆನರಾ ಬ್ಯಾಂಕ್ ಎಂಡಿ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ತಿಳಿಸಿದ್ದಾರೆ.

ಈ ಹಿಂದೆ ಬ್ಯಾಂಕಿನ ಗ್ರಾಹಕರು ತಿಂಗಳಿಗೆ ಕನಿಷ್ಠ ಮೊತ್ತವನ್ನು ಖಾತೆಯಲ್ಲಿ ಉಳಿಸಿಕೊಳ್ಳಬೇಕಿತ್ತು. ಒಂದು ವೇಳೆ ಕನಿಷ್ಠ ಮೊತ್ತ ಉಳಿಸಿಕೊಳ್ಳಲು ವಿಫಲವಾದಲ್ಲಿ ದಂಡ ಶುಲ್ಕ ಪಾವತಿಸಬೇಕಿತ್ತು. ಇನ್ನು ಮುಂದೆ ಕನಿಷ್ಠ ಮೊತ್ತ ಕಾಯ್ದುಕೊಳ್ಳದಿದ್ದರೂ ಯಾವುದೇ ದಂಡ ಪಾವತಿಸಬೇಕಿಲ್ಲ. ಇದರಿಂದ ಲಕ್ಷಾಂತರ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read