ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್, ಪಾರ್ಸೆಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

 ಸೇವೆಯನ್ನುಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ದಾವಣಗೆರೆ ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read