HomeEntertainment'ಡಿ ಬಾಸ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಒಟಿಟಿಯಲ್ಲಿ 'ಕಾಟೇರ' ರಿಲೀಸ್ ಗೆ ಡೇಟ್...

‘ಡಿ ಬಾಸ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಒಟಿಟಿಯಲ್ಲಿ ‘ಕಾಟೇರ’ ರಿಲೀಸ್ ಗೆ ಡೇಟ್ ಫಿಕ್ಸ್..!

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಕಾಟೇರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿವಾದಗಳಿಗೂ ಕಾರಣವಾಗಿದ್ದ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಇದೀಗ ಒಟಿಟಿಗೆ ಬರಲು ರೆಡಿ ಆಗಿದೆ.

Zee5 ನಲ್ಲಿ ಈ ಸಿನಿಮಾ ಮುಂದಿನ ವಾರ ಬರುತ್ತಿದೆ. ಹೌದು, ಮುಂದಿನ ಶುಕ್ರವಾರ ಈ ಸಿನಿಮಾ Zee5 ನಲ್ಲಿ ಪ್ರದರ್ಶನ ಕಾಣಲಿದೆ.

ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ಜಡೇಶ್ ಕುಮಾರ್ ಹಂಪಿ ಕಥೆ ಬರೆದಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜೋಡಿ ಆಗಿ ಮಾಲಾಶ್ರೀ ಪುತ್ರಿ ಆರಾಧನಾ ಅಭಿನಯಿಸಿದ್ದಾರೆ. ಶೃತಿ, ಜಗಪತಿ ಬಾಬು, ಕುಮಾರ್ ಗೋವಿಂದ್, ವಿನೋದ್ ಕುಮಾರ್, ಮಾಸ್ಟರ್ ರೋಹಿತ್, ಅವಿನಾಶ್, ಶ್ರೀನಿವಾಸ ಮೂರ್ತಿ, ಹಾಗೂ ಪದ್ಮ ವಸಂತಿ ಉಳಿದ ಪಾತ್ರವರ್ಗದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular