ಬೆಂಗಳೂರು : ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೊಸ ಚಿತ್ರ ‘ಡೆವಿಲ್’ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಈ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದು, ‘ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ – ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ’ ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.
ಕಾಟೇರ ಸಿನಿಮಾದ ಬಳಿಕ ಡೆವಿಲ್ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಿಕ್ಕಾಪಟ್ಟೆ ಕ್ಯುರಿಯಾಸಿಟಿಯಿದೆ. ‘ಡೆವಿಲ್’ ಚಿತ್ರವನ್ನು ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡುತ್ತಿದ್ದು, ತುಳುನಾಡ ಕುವರಿ ರಚನಾ ರೈ ದರ್ಶನ್ ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಒಟ್ಟಿನಲ್ಲಿ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಕ್ಯುರಿಯಾಸಿಟಿಯಿದೆ.
https://twitter.com/dasadarshan/status/1793501115117674933?ref_src=twsrc%5Etfw%7Ctwcamp%5Etweetembed%7Ctwterm%5E1793501115117674933%7Ctwgr%5Eb9aac31f3b012eabd69021d78aee4ab8e5abf1c8%7Ctwcon%5Es1_&ref_url=https%3A%2F%2Fpublictv.in%2Factor-darshan-thoogudeepa-starrer-devil-movie-will-be-released-in-christmas-2024%2F