ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಡಿಸೆಂಬರ್ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಚಿತ್ರದ ಪ್ರಚಾರ ಹೊಣೆ ಹೊತ್ತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗೌಹಾಟಿಯ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಡಿಸೆಂಬರ್ 12ರಂದು ಬಿಡುಗಡೆ ಎಂದು ಘೋಷಣೆ ಮಾಡಲಾಗಿತ್ತು. ಭರ್ಜರಿ ಪ್ರಚಾರ ಕೂಡ ಕೈಗೊಳ್ಳಲಾಗಿತ್ತು. ಇದೀಗ ಚಿತ್ರತಂಡ ಏಕಾಏಕಿ ಸಿನಿಮಾ ಬಿಡುಗಡೆ ದಿನಾಂಕವನ್ನು ಬದಲಿಸಿ ಒಂದು ದಿನ ಮೊದಲೇ ಮಾಡಲಾಗುತ್ತಿದೆ. ಡಿಸೆಂಬರ್ 12ರ ಬದಲಿಗೆ ಡಿ. 11ರ ಗುರುವಾರವೇ ‘ಡೆವಿಲ್’ ಬಿಡುಗಡೆಯಾಗಲಿದೆ.
