ಭಕ್ತರಿಗೆ ಸಂತಸದ ಸುದ್ದಿ : ರಾಜ್ಯದ ಪ್ರಮುಖ ದೇವಸ್ಥಾನಗಳ ಸೇವೆಗಳನ್ನು ಕಾಯ್ದಿರಿಸಲು ಪ್ರತ್ಯೇಕ ಆಯಪ್ ಅಭಿವೃದ್ಧಿ

ಬೆಂಗಳೂರು : ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯನ್ನು ಕಾಯ್ದಿರಿಸಲು ಪ್ರತ್ಯೇಕ ಆ್ಯಪ್‌ ತಯಾರಿಸಲಾಗುತ್ತಿದ್ದು, ಆರಂಭಿಕವಾಗಿ ಬನಶಂಕರಿಯಲ್ಲಿರುವ ಬನಶಂಕರಿ ಅಮ್ಮನವರ ದೇವಾಲಯಕ್ಕೆ ಸಂಬಂಧಿಸಿದ ಆ್ಯಪ್‌ ಬಿಡುಗಡೆ ಮಾಡಲಾಗಿದೆ.

ಭಕ್ತರ ಅನುಕೂಲಕ್ಕಾಗಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿನ ಸೇವೆಗಳನ್ನು ಆನ್‌ಲೈನ್‌ ಮೂಲಕ ಹಾಗೂ ಮೊಬೈಲ್‌ ಮೂಲಕ ಕಾಯ್ದಿರಿಸಲು ಪೋರ್ಟಲ್‌ ಹಾಗೂ ಮೊಬೈಲ್‌ ಆ್ಯಪ್‌ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಪ್ರತಿ ದೇವಸ್ಥಾನಕ್ಕೆ ಪ್ರತ್ಯೇಕ ಆ್ಯಪ್‌ ಇರಲಿದೆ. ಬನಶಂಕರಿ ದೇವಸ್ಥಾನದಲ್ಲಿ ಇದೀಗ ಆರಂಭವಾಗಿದ್ದು, ವಿವಿಧ ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಸುಮಾರು 34,563 ಅಧಿಸೂಚಿತ ‘ಸಿ’ ವರ್ಗದ ದೇವಾಲಯಗಳ ಅರ್ಚಕರಿಗೆ ಪಾವತಿಸಲಾಗುವ ತಸ್ತೀಕ್ ಹಾಗೂ ವರ್ಷಾಸನವನ್ನು ಮತ್ತು ಅರ್ಚಕರಿಗೆ ನೀಡಲಾಗುವ ಮರಣ ಪರಿಹಾರ ಹಾಗೂ ಅರ್ಚಕರ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿ ಪ್ರೋತ್ಸಾಹ ಧನ ವನ್ನು ನೇರವಾಗಿ ಅರ್ಚಕರ ಖಾತೆಗೆ ಪಾವತಿಸಲು ಅನುವು ಆಗುವಂತೆ ಅಭಿವೃದ್ಧಿ ಪಡಿಸಲಾಗಿರುವ ಪೋರ್ಟಲ್ ಹಾಗೂ ಮೊಬೈಲ್ ಆಪ್’ನ್ನೂ ಸೇವೆಗೆ ಸಮರ್ಪಿಸಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read