HomeLatest Newsತಿರುಪತಿಗೆ ತೆರಳುವ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್: ಮದುವೆ, ನಾಮಕರಣ ಇತರೆ ಸಮಾರಂಭ ಆಯೋಜಿಸಲು ಕಲ್ಯಾಣ...

ತಿರುಪತಿಗೆ ತೆರಳುವ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್: ಮದುವೆ, ನಾಮಕರಣ ಇತರೆ ಸಮಾರಂಭ ಆಯೋಜಿಸಲು ಕಲ್ಯಾಣ ಮಂಟಪ ರೆಡಿ

ತಿರುಪತಿಯ ತಿರುಮಲದಲ್ಲಿರುವ ಕರ್ನಾಟಕ ಛತ್ರದಲ್ಲಿ ‘ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ’ವನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದ್ದಾರೆ.

ನೂತನವಾಗಿ ನಿರ್ಮಾಣಗೊಂಡಿರುವ ಮೈಸೂರು ಕಾಂಪ್ಲೆಕ್ಸ್‌ನ(ಹೊಸ ಕರ್ನಾಟಕ ಛತ್ರ) ಒಂದು ಬ್ಲಾಕ್‌ನಲ್ಲಿ ನಿರ್ಮಿಸಲಾಗಿರುವ ಕೃಷ್ಣರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪದಲ್ಲಿ 13 ಕೊಠಡಿಗಳು ಮತ್ತು 500 ಆಸನಗಳಿವೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ. ಆನ್‌ಲೈನ್ ಮೂಲಕ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.

36 ಕೊಠಡಿಗಳ ವಿಐಪಿ ಬ್ಲಾಕ್ ಕಲ್ಯಾಣಿ, ಕರ್ನಾಟಕ ಛತ್ರದಲ್ಲಿ ದೇವಸ್ಥಾನ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಸೆಪ್ಟೆಂಬರ್ ನಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular