HomeKarnatakaಹಾಸನದ ಪುರದಮ್ಮ ದೇವಾಲಯದ ಭಕ್ತರಿಗೆ ಗುಡ್‌ನ್ಯೂಸ್

ಹಾಸನದ ಪುರದಮ್ಮ ದೇವಾಲಯದ ಭಕ್ತರಿಗೆ ಗುಡ್‌ನ್ಯೂಸ್

ಪುರದಮ್ಮ ದೇವಾಲಯಕ್ಕೆ ಹಾಸನ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ, ರಾಜ್ಯದಿಂದಲ್ಲೂ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಾರೆ. ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.

ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮಸ್ಯೆಗಳ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಪುರದಮ್ಮ ದೇವಾಲಯದ ಹಣವನ್ನು ಬೇರೆಯ ಯಾವುದೇ ಇತರೆ ಕಾಮಗಾರಿಗಳಿಗೆ ಬಳಕೆ ಮಾಡಬಾರದು, ದೇವಾಲಯದ ಮೂಲಭೂತ ಸೌಕರ್ಯಗಳಿಗೆ ಹಾಗೂ ಅಭಿವೃದ್ದಿಗೆ ಮಾತ್ರ ಬಳಕೆ ಮಾಡಬೇಕು. ದೇವಾಲಯದ ಹುಂಡಿ ಎಣಿಕೆಯನ್ನು ಸ್ಥಳೀಯರು ಸಮ್ಮುಖದಲ್ಲಿ ಮಾಡಬೇಕು ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಮಾತನಾಡಿ, “ಪುರದಮ್ಮ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲಕ್ಕಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು, ಕಸದ ನಿರ್ವಹಣೆ ಆಗಬೇಕು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು” ಎಂದರು.

ಪುರದಮ್ಮ ದೇವಾಲಯಕ್ಕೆ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಸಭೆಯನ್ನು ನಡೆಸುವಂತೆ ತಿಳಿಸಿದರು.

ದೇವರ ಹೆಸರಿನಲ್ಲಿ ನೀಡುವ ಕಾಣಿಕೆಗಳನ್ನು ಪರಿಶೀಸಬೇಕು. ದೇವಿಗೆರೆ ದೇವಾಲಯದಲ್ಲಿನ ಆವರಣದಲ್ಲಿ ಪಾರ್ಕಿಂಗ್ ಟೆಂಡರ್ ಪ್ರಕ್ರಿಯೆ ಪೂರ್ಣಗೊಸಬೇಕು. ದೇವಸ್ಥಾನದ ಶಿಲಾವ್ಯಸ್ಥೆಯಲ್ಲಿ ಇದ್ದಲ್ಲಿ ಸರಿಪಡಿಸುವಂತೆ ಹಾಗೂ ಆವರಣದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular