HomeLatest NewsBREAKING : ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ಚಿಕ್ಕಮಗಳೂರಿನಿಂದ ನೂತನ ರೈಲು ಸಂಚಾರ...

BREAKING : ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ಚಿಕ್ಕಮಗಳೂರಿನಿಂದ ನೂತನ ರೈಲು ಸಂಚಾರ ಆರಂಭ !


ಚಿಕ್ಕಮಗಳೂರು : ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್
ಸಿಕ್ಕಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಸಂಚಾರ ಆರಂಭವಾಗಿದೆ.

ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ.

ಈ ಕುರಿತು ಟ್ವೀಟ್ ಮಾಡಿದ ಸಚಿವ ವಿ ಸೋಮಣ್ಣ ”ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಈ ಭಾಗದ ಜನತೆ ಈ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ” ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular