ಭಕ್ತರಿಗೆ ಗುಡ್ ನ್ಯೂಸ್ : ಶ್ರೀಶೈಲಂಗೆ ‘KKRTC’ಯಿಂದ ವಿಶೇಷ ಸಾರಿಗೆ ಸೌಲಭ್ಯ

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಶ್ರೀಶೈಲಂಗೆ ಹೋಗಲು ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ಅವರು ತಿಳಿಸಿದ್ದಾರೆ.

ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟೆ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಭ್ರಮರಾಂಬಾ ಮಲ್ಲಿಕಾರ್ಜುನ ಸ್ವಾಮಿಯ ವಿಶೇಷ ದರ್ಶನಕ್ಕಾಗಿ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಮಾ.21 ರಿಂದ 31 ರ ವರೆಗೆ ರವರೆಗೆ ವಿಶೇಷ ಸಾರಿಗೆ ಒದಗಿಸಲಾಗಿದೆ.

ಮಾಹಿತಿಗಾಗಿ ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರು-7760992163, ಬಳ್ಳಾರಿ-2ನೇ ಘಟಕ ವ್ಯವಸ್ಥಾಪಕರು-7760992164, ಸಿರುಗುಪ್ಪ ಘಟಕ ವ್ಯವಸ್ಥಾಪಕರು-7760992165, ಕುರುಗೋಡು ಘಟಕ ವ್ಯವಸ್ಥಾಪಕರು-9606483671, ಸಂಡೂರು ಘಟಕ ವ್ಯವಸ್ಥಾಪಕರು-7760992309 ಗೆ ಸಂಪರ್ಕಿಸಬಹುದು.
ಈ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read