ವಿಶೇಷಚೇತನರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಬ್ಯಾಟರಿ ಚಾಲಿತ ವಾಹನಗಳ ವಿತರಣೆಗೆ ಕ್ರಮ

ಬಳ್ಳಾರಿ : ವಿಶೇಷಚೇತನರಿಗೆ ಸಚಿವ ಬಿ.ನಾಗೇಂದ್ರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ವಿಶೇಷಚೇತನರಿಗೆ ಬ್ಯಾಟರಿ ಚಾಲಿತ ವಾಹನಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಆರ್ಟಿಫಿಶಿಯಲ್ ಲಿಂಬ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ಇವರ ವತಿಯಿಂದ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಜಿಲ್ಲಾ ವಕ್ಸ್ ಸಮಿತಿಯ ಶಾದಿ ಮಹಲ್‍ನಲ್ಲಿ ಭಾನುವಾರ ಏರ್ಪಡಿಸಲಾದ ಕೇಂದ್ರ ಸರ್ಕಾರದ ವಿಶೇಷ ಆಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ವಿಶೇಷಚೇತನರಿಗೆ ಬ್ಯಾಟರಿ ಚಾಲಿತ ವಾಹನಗಳನ್ನು ವಿತರಿಸಲು ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಜಿಲ್ಲಾ ಖನಿಜ ಪ್ರತಿಷ್ಠಾನ ಅನುದಾನದಲ್ಲಿ ಖರೀದಿಸಲು ಚಿಂತಿಸಲಾಗುವುದು ವಿಶೇಷಚೇತನರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿ ಜೀವನ ಹೊಂದುವ ಮೂಲಕ ಶಸಕ್ತರಾಗಬೇಕು, ವಿಶೇಷಚೇತನರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ  ಸರ್ಕಾರವು ವಿಶೇಷಚೇತನರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅವುಗಳನ್ನು ಸದುಪಯೋಗಪಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕ್ರೀಡಾ ಇಲಾಖೆಯಿಂದ ವಿಶೇಷಚೇತನ ಕ್ರೀಡಾಪಟುಗಳಿಗೆ ವೀಲ್‍ಚೇರ್ ಸೈಕಲ್‍ಗಳನ್ನು ವಿತರಿಸಲಾಗಿದೆ. ವಿಶೇಷಚೇತನರನ್ನು ಮುಖ್ಯ ವಾಹಿನಿಗೆ ತರಲು ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಬೇಕು. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಮಾದರಿಯಾಗಬೇಕು. ಏನೇ ಸೌಲಭ್ಯಗಳು ಬೇಕಾದಲ್ಲಿ ಆಯಾ ಶಾಸಕರ ಗಮನಕ್ಕೆ ತರಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read