ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಗುಡ್ ನ್ಯೂಸ್

2022-23 ಹಾಗೂ 2023-24 ಮತ್ತು 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾ ತೇರ್ಗಡೆಯಾದ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in) ಮೂಲಕ ಅಥವಾ ದಾವಣಗೆರೆ ಒನ್/ಗ್ರಾಮ ಒನ್/ಕರ್ನಾಟಕ ಒನ್/ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಹಣ ಪಡೆಯುತ್ತಿರುವ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ತ್ರೈಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನುಮುಂದೆ ಈ ಮೊದಲಿನಂತೆ ಮಾಸಿಕವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಆನ್‌ಲೈನ್ ಮೂಲಕ ದಾಖಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಪಿ.ಬಿ. ರಸ್ತೆ, ದಾವಣಗೆರೆಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read