ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : 2022-23 ಕ್ಕಿಂತ ಮೊದಲು ಉತ್ತೀರ್ಣರಾದವರಿಗೆ ಯುವನಿಧಿ ಜೊತೆಗೆ ಕೌಶಲ್ಯ ತರಬೇತಿ ‌

ಬೆಂಗಳೂರು : ರಾಜ್ಯ ಸರ್ಕಾರವು ಡಿಪ್ಲೋಮಾ, ಪದವೀಧರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆ ಜೊತೆಗೆ ಕೌಶಲ್ಯ ತರಬೇತಿಯನ್ನು ಆಯೋಜನೆಗೆ ಮುಂದಾಗಿದೆ.

ಈ ಕುರಿತು ಕೌಶಲಾಭಿವೃದ್ಧಿ , ಜೀವನೋಪಾಯ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ ಮಾಹಿತಿ ನೀಡಿದ್ದು, 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ 2 ವರ್ಷಗಳ ವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಬಹುದಾಗಿದ್ದು, ಅದಕ್ಕಿಂತ ಮೊದಲು ಉತ್ತೀರ್ಣರಾದ ಯುವಕರು ಸ್ಕಿಲ್‌ ಕನೆಕ್ಟ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅವರಿಗೆ ಬೇಕಾದ ತರಬೇತಿಯನ್ನು ಆಯ್ಕೆ ಮಾಡಿಕೊಳ್ಳಲು ಪೋರ್ಟಲ್‌ನಲ್ಲಿ ಅವಕಾಶ ನೀಡಲಾಗಿದೆ ಎಂದು ತೀಳಿಸಿದ್ದಾರೆ.

ರಾಜ್ಯದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ-ಖಾಸಗಿ ಸಂಸ್ಥೆ, ಕೈಗಾರಿಕೆಯಲ್ಲಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ತಮ್ಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ಜಂಟಿ ನೇತೃತ್ವದಲ್ಲಿ ಸ್ಕಿಲ್ ಅಡ್ವಾನ್ಸಡ್ ಕಮಿಟಿ ರಚಿಸಿದ್ದು, ಫೆಬ್ರವರಿ ಮೊದಲನೆ ವಾರದಲ್ಲಿ ಸಮಿತಿ ನೀಲಿ ನಕ್ಷೆ ಸಿದ್ದಪಡಿಸಲಿದೆ. ತದನಂತರ ನೀಲಿ ನಕ್ಷೆ ಆಧಾರದ ಮೇಲೆ ಇಡೀ ವಿಶ್ವಕ್ಕೆ ಮಾದರಿಯಾಗುವಂತಹ ಮನವ ಸಂಪನ್ಮೂಲ ಪೂರೈಕೆಗೆ ಯೋಜನೆ ರೂಪಿಸಲು ಮುಂದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read