ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಶೀಘ್ರವೇ `ಯುವನಿಧಿ’ ಯೋಜನೆ ಜಾರಿ

ಹೊಸಪೇಟೆ : ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಿಂಗಳಿಗೆ 3,000 ರೂ, 1,500 ರೂ.ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಶೀಘ್ರವೇ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿ ಮಾಡುತ್ತಿದ್ದು, ಯುವನಿಧಿ ಕಾರ್ಯಕ್ರಮವನ್ನೂ ಸದ್ಯದಲ್ಲೇ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಅಂದಾಜು 60 ಸಾವಿರ ಕೋಟಿ ರೂ. ಆಗಲಿದೆ. ಸಹಜವಾಗಿ ಅನುದಾನದ ಕೊರತೆ ಉಂಟಾಗುತ್ತದೆ. ಇದನ್ನು ನಾನೂ ಒಪ್ಪುತ್ತೇನೆ. ಆದರೆ ಇನ್ನೂ 6 ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ.ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದ್ದು, ಶೀಘ್ರವೇ ಯುವನಿಧಿ ಯೋಜನೆಯನ್ನೂ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read