ಬೆಂಗಳೂರು ನಗರ ಜಿಲ್ಲೆ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಶಿಶುಪಾಲನ ಭತ್ಯೆ ಯೋಜನೆಗಳಲ್ಲಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ತಂತ್ರಾಂಶದಡಿಯಲ್ಲಿ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನರಿಂದ ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ ಸೈಟ್ https://suvidha.karnataka.gov.in ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು -29 ಅಥವಾ ದೂರವಾಣಿ ಸಂಖ್ಯೆ: 080-29752324 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.