HomeKarnatakaಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ : ʻಗುಳೆʼ ಹೋಗದಂತೆ ತಡೆಯಲು 860 ಕೋಟಿ...

ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ : ʻಗುಳೆʼ ಹೋಗದಂತೆ ತಡೆಯಲು 860 ಕೋಟಿ ರೂ. ಬಿಡುಗಡೆ

ಬೆಂಗಳೂರು : ಬರದಿಂದ ತತ್ತರಿಸಿರುವ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗುಳೇ ಹೋಗದಂತೆ ತಡೆಯಲು 860 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲಾಗಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು,  ಜನರು ಗುಳೇ ಹೋಗದಂತೆ ತಡೆಯಲು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ₹ 2000ದಂತೆ ಅಂದಾಜು 34 ಲಕ್ಷ ರೈತರಿಗೆ ₹ 650 ಕೋಟಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ ತಿಳಿಸಿದ್ದಾರೆ.

ಬರದ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಕುಡಿಯುವ ನೀರು, ಮೇವು, ಉದ್ಯೋಗ ಒದಗಿಸಲಾಗುತ್ತಿದೆ. ರಾಜ್ಯದಿಂದ 860 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದ್ದು, ಇದನ್ನು ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular